ಮಡಿಕೇರಿ, ಏ. 4: ವೀರಾಜಪೇಟೆ ತಾಲೂಕಿನ ಕುಟ್ಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಬ್ಬರು ಎಂಬಿಬಿಎಸ್ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಜಿಲ್ಲಾಧಿಕಾರಿ ಅವರು ನೇಮಕ ಮಾಡಿದ್ದಾರೆ. ವೈದ್ಯರು 1-4-2019 ರಂದು ಕರ್ತವ್ಯಕ್ಕ್ಕೆ ವರದಿ ಮಾಡಿಕೊಂಡಿದ್ದು, ಕುಟ್ಟ ಆರೋಗ್ಯ ಕೇಂದ್ರದಲ್ಲಿ ಒಟ್ಟು ಇಬ್ಬರು ವೈದ್ಯರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಹಾಗೆಯೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಒಬ್ಬರು ಮಹಿಳಾ ವೈದ್ಯರನ್ನು ವಾರದಲ್ಲಿ ಒಂದು ದಿವಸ ಹಗಲು ವೇಳೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜನೆ ಮಾಡುವದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ತಿಳಿಸಿದ್ದಾರೆ.