ಮೂರ್ನಾಡು, ಏ. 4 : ಇಲ್ಲಿನ ಭಾರತೀಯ ನೃತ್ಯ ಕಲಾ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ನೃತ್ಸೋತ್ಸವ ಸಮಾರಂಭ ತಾ.5ರಂದು ಜರುಗಲಿದೆ.
ಮೂರ್ನಾಡು ಕೊಡವ ಸಮಾಜದಲ್ಲಿ ಸಂಜೆ 4.30 ಗಂಟೆಗೆ ಪ್ರಾರಂಭವಾಗುವ ಸಮಾರಂಭವನ್ನು ನಿವೃತ್ತ ಮುಖ್ಯ ಶಿಕ್ಷಕಿ ಹೆಚ್.ಕೆ ಸರೋಜ ಉದ್ಘಾಟಿಸಲಿದ್ದಾರೆ. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮೂರ್ನಾಡು ವಿದ್ಯಾಸಂಸ್ಥೆಯ ನಿರ್ದೇಶಕ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮೇಚಿರ ಡಾ. ಸುಭಾಶ್ ನಾಣಯ್ಯ ಭಾಗವಹಿಸಲಿದ್ದಾರೆ ಎಂದು ನೃತ್ಯ ಶಾಲೆಯ ನೃತ್ಯ ಶಿಕ್ಷಕಿ ಜಲಜ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.