ಮಡಿಕೇರಿ, ಏ.5 : ನಗರದ ಹೊರ ವಲಯದ ಕರ್ಣಂಗೇರಿ ಗ್ರಾಮದ ಶ್ರೀರಾಜರಾಜೇಶ್ವರಿ ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಗುಡಿಯಲ್ಲಿ ಯುಗಾದಿಯ ತಾ. 6 ರಂದು (ಇಂದು) ಶ್ರೀ ವೆಂಕಟರಮಣ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ತಿಳಿಸಿದ್ದಾರೆ.
ಕಳಸ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ.