ಮಡಿಕೇರಿ, ಏ. 5: ಚುನಾವಣೆಯಲ್ಲಿ ಅರ್ಹರೆಲ್ಲರೂ ಮತದಾನ ಮಾಡುವದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ. ಮತದಾರರನ್ನು ಪ್ರೇರೇಪಿಸುವಂತೆ ಆಸಕ್ತರಿಗೆ ಚುಟುಕು ಹಾಗೂ ಕಾರ್ಟೂನ್ ಸ್ಪರ್ಧೆಯನ್ನು ಪೋಸ್ಟ್ ಕಾರ್ಡ್ ಮುಖಾಂತರ ಏರ್ಪಡಿಸಲಾಗಿದೆ. ಆಸಕ್ತರು ಮತದಾನ, ಚುನಾವಣೆಗೆ ಸಂಬಂಧಿಸಿದಂತೆ ಎರಡು ಸಾಲಿನ ಚುಟುಕನ್ನು ಕನ್ನಡ ಹಾಗೂ ಪ್ರಾದೇಶಿಕ ಭಾಷೆಗಳಾದ ಕೊಡವ, ತುಳು, ಅರೆಭಾಷೆ, ಬ್ಯಾರಿ ಮತ್ತು ಬುಡಕಟ್ಟು ಭಾಷೆಗಳಲ್ಲಿ ರಚಿಸಿ ಪೋಸ್ಟ್ ಕಾರ್ಡಿನಲ್ಲಿ ಕಳುಹಿಸಬಹುದಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಕಾರ್ಟೂನ್‍ಗಳನ್ನು ರಚಿಸಿ ಪ್ರತ್ಯೇಕವಾಗಿ ಪೋಸ್ಟ್ ಕಾರ್ಡಿನಲ್ಲಿ ಕಳುಹಿಸಬೇಕು. ಎರಡು ಸ್ಪರ್ಧೆಗಳ ಪೋಸ್ಟ್ ಕಾರ್ಡ್‍ಗಳು ತಾ. 10 ರೊಳಗೆ ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬೇಕು. ಎರಡೂ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08272-298379 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ ತಿಳಿಸಿದ್ದಾರೆ.