ಮಡಿಕೇರಿ, ಏ. 5: ಚುನಾವಣೆ ಎದುರಿಸುವ ನಿಟ್ಟಿನಲ್ಲಿ ತಾ. 2 ರಂದು ಚೆಟ್ಟಳ್ಳಿ ವಲಯ ಕಾಂಗ್ರೆಸ್ ಕಚೇರಿಯಲ್ಲಿ ಪದಾಧಿಕಾರಿಗಳ ಮತ್ತು ಬೂತ್ ಪ್ರಮುಖರ ಸಭೆ ವಲಯ ಕಾಂಗ್ರೆಸ್ ಅಧ್ಯಕ್ಷ ಪಪ್ಪು ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ ಮಾತನಾಡಿ, ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಚೆಟ್ಟಳ್ಳಿ ವಲಯದ ಆರು ಬೂತ್ಗಳಲ್ಲಿ ಹೆಚ್ಚಿನ ಮತವನ್ನು ಗಳಿಸಲು ಮಾರ್ಗದರ್ಶನ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಸುನೀತಾ ಮಂಜುನಾಥ್ ಮಾತನಾಡಿ, ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರನ್ನು ಸೇರಿಸಿಕೊಂಡು ತಮ್ಮ ವಲಯದಲ್ಲಿ ಹೆಚ್ಚಿನ ಮತವನ್ನು ಕಾಂಗ್ರೆಸ್ಗೆ ಕೊಡಿಸುವ ಭರವಸೆ ನೀಡಿದರು. ರಾಜೀವ್ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನೀರಾ ಮೈನಾ ಮಾತನಾಡಿ, ಬಿ.ಜೆ.ಪಿ. ಅಭ್ಯರ್ಥಿ ಪ್ರತಾಪ ಸಿಂಹ ಅವರು 5 ವರ್ಷಗಳ ಕಾಲ ನಿಷ್ಕ್ರಿಯ ಸಂಸದರಾಗಿದ್ದರು ಎಂದು ಆರೋಪಿಸಿದರು. ಸಭೆಯಲ್ಲಿ ಬ್ಲಾಕ್ ಉಪಾಧ್ಯಕ್ಷ ಪ್ಯಾಟ್ರಿಕ್ ಲೋಬೋ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತೀರ್ಥಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹಮ್ಮದ್ ಕುಟ್ಟಿ, ಶಶಿ ಮಂಜುನಾಥ್, ವಿನೋದ್ ಕುಮಾರ್, ಮೈಕಲ್ ಮಾರ್ಷಲ್, ವಲಯ ಮತ್ತು ಬೂತ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎಂ. ವೆಂಕಟೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.