ಮಡಿಕೇರಿ, ಏ. 5: ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ತಾ. 7ರಂದು (ನಾಳೆ) ಕೊಡವ ಸಮಾಜದ ಸಭಾಂಗಣದಲ್ಲಿ ಕೂಟದ ವಾರ್ಷಿಕೋತ್ಸವ ಹಾಗೂ ಪೊಮ್ಮಕ್ಕಡ ನಾಳ್ ಕಾರ್ಯಕ್ರಮ ನಡೆಯಲಿದೆ. ಅತಿಥಿಗಳಾಗಿ ಕೊಡವ ಅಕಾಡೆಮಿ ಮಾಜಿ ಅಧ್ಯಕ್ಷೆ ಉಳ್ಳಿಯಡ ಡಾಟಿ ಪೂವಯ್ಯ, ಸದಸ್ಯೆ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಪಾಲ್ಗೊಳ್ಳಲಿದ್ದಾರೆ. ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ.