ಸೋಮವಾರಪೇಟೆ, ಏ. 5: ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದ ಸ್ವೀಪ್ ಕಾರ್ಯಕ್ರಮದ ಅಡಿಯಲ್ಲಿ ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾ ವೇದಿಕೆ ವತಿಯಿಂದ ಮತದಾನದ ಮಹತ್ವ ಕುರಿತು ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ‘ಮತದಾನ ನಮ್ಮ ಹಕ್ಕು, ಅದನ್ನು ಯಾವದೇ ಆಸೆ, ಆಮಿಷಗಳಿಗೆ ಮಾರಿಕೊಳ್ಳಬೇಡಿ, ಮತವನ್ನು ಮಾರಿಕೊಂಡರೆ ಮನೆಯ ಮಗಳನ್ನು ಮಾರಿಕೊಂಡಂತೆ’ ಎಂಬ ಸಂದೇಶ ಸಾರುವ ನಾಟಕವನ್ನು ವೇದಿಕೆಯ ಕಲಾವಿದರು ಅಭಿನಯಿಸುವ ಮೂಲಕ ಸಾರ್ವಜನಿಕರಲ್ಲಿ ಮತದಾನ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.

ಕಾರ್ಯಕ್ರಮಕ್ಕೆ ತಾಲೂಕು ಯುವ ಒಕ್ಕೂಟ ಸ್ಥಾಪಕ ಅಧ್ಯಕ್ಷ ಉದಯಕುಮಾರ್ ಚಾಲನೆ ನೀಡಿದರು. ಈ ಸಂದರ್ಭ ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಪಿ. ಲೋಕೇಶ್, ತೋಳೂರುಶೆಟ್ಟಳ್ಳಿ ಗ್ರಾಮದ ಸುಧಾಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಲಾ ವೇದಿಕೆಯ ಈ. ರಾಜು, ಚಂದ್ರಪ್ಪ, ಎಂ. ರಾಜು, ಶಿವಕುಮಾರ್, ಯಶೋಧ ಅವರುಗಳು ನಾಟಕವನ್ನು ಪ್ರಸ್ತುತಪಡಿಸಿದರು.