ವೀರಾಜಪೇಟೆ, ಏ. 5: ಕಾಲೇಜು ವಿದ್ಯಾರ್ಥಿಗಳು ದುಶ್ಚಟ ಹಾಗೂ ಮೊಬೈಲ್ ಫೋನ್‍ಗಳಿಂದ ದೂರವಿರಬೇಕು ಹಾಗೂ ಶಿಕ್ಷಣಕ್ಕೆ ವಿಶೇಷ ಗಮನ ನೀಡಬೇಕು ಎಂದು ಕಾವೇರಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕಮಲಾಕ್ಷಿ ತಿಳಿಸಿದರು.

ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾಲೇಜಿನ ವಿದ್ಯಾರ್ಥಿಗಳ, ಪೋಷಕರ, ಅಧ್ಯಾಪಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಸ್ತು, ದಕ್ಷತೆ, ಪ್ರಾಮಾಣಿಕತೆಯನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.

ಕಾಲೇಜಿನ ಪೋಷಕರ ಹಾಗೂ ಅಧ್ಯಾಪಕ ಸಂಘದ ಕಾರ್ಯದರ್ಶಿ ಪಿ.ಬಿ. ಮೇದಪ್ಪ, ನಿರ್ದೇಶಕ ಎಂ. ಮಿನ್ನು ದೇವಯ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ಸಂಚಾಲಕ ಹೆಚ್.ವಿ. ನಾಗರಾಜು ಹಾಜರಿದ್ದರು.