ಸುಂಟಿಕೊಪ್ಪ, ಏ.5: ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯ ಟ್ರಸ್ಟ್ ವತಿಯಿಂದ ತಾ. 6 ರಂದು (ಇಂದು) ದೇವಾಲಯದಲ್ಲಿ ಯುಗಾದಿ ಹಬ್ಬವನ್ನು ಆಚರಿಸಲಾಗುವದು. ಕೊಡಗರಹಳ್ಳಿಯ ಶ್ರೀಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಈ ಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.