ಮಡಿಕೇರಿ, ಏ. 5 : ಬೇರೆ ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ಸಾಲಮನ್ನಾ ಯೋಜನೆಯನ್ನು ಕೊಡಗು ಜಿಲ್ಲೆಯಲ್ಲೂ ಜಾರಿಗೊಳಿಸಿ ರೈತರಿಗೆ ಸಾಲಮನ್ನಾ ಋಣಮುಕ್ತ ಪತ್ರ ವಿತರಿಸಬೇಕು ಎಂದು ಕೊಡಗು ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿ ಅವರನ್ನು ಮನವಿ ಮೂಲಕ ಒತ್ತಾಯಿಸಲಾಯಿತು.

ರೈತ ಸಂಘದ ಅಧ್ಯಕ್ಷ ಚಿಮ್ಮಂಗಡ ಗಣೇಶ್ ಗಣಪತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರನ್ನು ಭೇಟಿ ಮಾಡಿ ಮನವಿ, ರಾಜ್ಯ ಸರ್ಕಾರ ಘೋಷಿಸಿರುವ ಸಾಲಮನ್ನಾ ಯೋಜನೆಯನ್ನು ಈಗಾಗಲೇ ರಾಜ್ಯದ ಒಂದಷ್ಟು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಿ, ಋಣಮುಕ್ತ ಪತ್ರ ನೀಡಲಾಗಿದೆ. ಆದರೆ, ಕೊಡಗು ಜಿಲ್ಲೆಯನ್ನು ಕಡೆಗಣಿಸಿರುವದು ಸರಿಯಲ್ಲ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಲವಂತದಿಂದ ಸಾಲ ಕಟ್ಟುವಂತೆ ಒತ್ತಾಯಿಸುತ್ತಿವದನ್ನು ತಡೆ ಹಿಡಿಯಬೇಕು ಎಂದು ಒತ್ತಾಯಿಸಿ ದರು.

ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಬೆಳೆನಾಶ ಆಗಿದೆ. ಇದರ ಬೆನ್ನೆಲ್ಲೇ ವಿಪರೀತ ಬಿಸಿಲಿನ ತಾಪದಿಂದ ಬೆಳೆ ಕೂಡ ನಾಶವಾಗುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಸಾಲಮನ್ನಾ ಯೋಜನೆಯನ್ನು ಅನುಷ್ಠಾನಗೊಳಿಸಿ ರೈತರ ಪರವಾಗಿ ಸರ್ಕಾರ ನಿಲ್ಲಬೇಕು ಎಂದು ಮನವಿ ಮಾಡಿಕೊಳ್ಳಲಾಯಿತು.

ಬೆಳೆದ ಬೆಳೆಗೆ ನ್ಯಾಯಯುತ ವಾದ ಬೆಂಬಲ ಬೆಲೆ ಸಿಗಬೇಕು, ಸಾಲಮನ್ನಾ ಮಾಡಿ ಮರು ಸಾಲವನ್ನು ಶೀಘ್ರದಲ್ಲಿ ನೀಡಬೇಕು ಎಂದು ಒತ್ತಾಯಿಸ ಲಾಯಿತು. ಈ ಸಂದರ್ಭ ರೈತ ಸಂಘದ ಪ್ರಮುಖರುಗಳಾದ ಮಚ್ಚಮಾಡ ರಂಜಿ, ಗುಡಿಯಂಗಡ ಪೂವಪ್ಪ, ಬಾದುಮಂಡ ಮಹೇಶ್, ಚೆಪ್ಪುಡೀರ ಮಹೇಶ್, ಚಂಗುಲಂಡ ರಾಜಪ್ಪ ಸೇರಿದಂತೆ 40 ಕ್ಕೂ ಹೆಚ್ಚು ಸದಸ್ಯರುಗಳು ಉಪಸ್ಥಿತರಿದ್ದರು.