ಮಡಿಕೇರಿ, ಏ. 5: ಹಿರಿಯ ನಾಗರಿಕರಿಗೆ ಸಂಬಂಧಿಸಿದಂತೆ ವಿಶೇಷ ಲೋಕದಾಲತ್ ಕಾರ್ಯಕ್ರಮವು ತಾ. 25 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಸಿವಿಲ್ ಕ್ರಿಮಿನಲ್, ಕೌಟುಂಬಿಕ ಪ್ರಕರಣಗಳನ್ನು ಇತ್ಯರ್ಥಪಡಿಸುವ ಕಾರ್ಯಕ್ರಮ ನಡೆಯಲಿದೆ. ಅರ್ಹರು ಈ ಸೌಲಭ್ಯ ಪಡೆದುಕೊಳ್ಳುವಂತೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ತಿಳಿಸಿದ್ದಾರೆ.