ವೀರಾಜಪೇಟೆ, ಏ. 5: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಇತ್ತೀಚೆಗೆ ವೀರಾಜಪೇಟೆ ಪಕ್ಷದ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರದ ಸಂಬಂಧ ಚರ್ಚೆ ನಡೆಸಿದರಲ್ಲದೆ ಕೊಡಗಿನಲ್ಲಿ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಲು ಸಹಕಾರ ನೀಡುವಂತೆ ಕೋರಿದರು.

ವೀರಾಜಪೇಟೆ ದೊಡ್ಡಟ್ಟಿ ಚೌಕಿಯಲ್ಲಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕೈಗೊಂಡ ಪ್ರಚಾರವನ್ನು ಮುಂದುವರೆಸಬೇಕೆಂದು ತಿಳಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್. ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್, ಪಕ್ಷದ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಾಂ, ಕಾರ್ಯದರ್ಶಿ ಎಂ.ಎಂ. ಶಶಿಧರನ್, ಪರಿಶಿಷ್ಟ ಜಾತಿ-ಪಂಗಡದ ಅಧ್ಯಕ್ಷ ವಿ.ಕೆ. ಸತೀಶ್‍ಕುಮಾರ್, ಪಂಚಾಯಿತಿ ಸದಸ್ಯರುಗಳಾದ ಪಟ್ಟಡ ರಂಜಿ ಪೂಣಚ್ಚ, ಡಿ.ಪಿ. ರಾಜೇಶ್ ಹಾಗೂ ಪಕ್ಷದ ಇತರ ಮುಖಂಡರು, ಕಾರ್ಯಕರ್ತರುಗಳು ಭಾಗವಹಿಸಿದ್ದರು.