ಮಡಿಕೇರಿ, ಏ.5 : 2018-19ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯವು ತಾ. 10 ರಿಂದ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಪ್ರಾರಂಭವಾಗಲಿದ್ದು, ಎಲ್ಲ ಮುಖ್ಯ ಮೌಲ್ಯಮಾಪಕರು, ಉಪ ಮುಖ್ಯ ಮೌಲ್ಯಮಾಪಕರು ಹಾಗೂ ಸಹ ಮೌಲ್ಯಮಾಪಕರುಗಳು ಕಡ್ಡಾಯವಾಗಿ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ಸೂಚಿಸಿದೆ. ಮೌಲ್ಯಮಾಪನ ಕಾರ್ಯಕ್ಕೆ ಗೈರುಹಾಜರಾದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ 1983 ನಿಯಮ 23 ಮತ್ತು 122 ರಡಿ ಶಿಸ್ತು ಕ್ರಮ ಜರುಗಿಸಲಾಗುವದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಪಿ.ಎಸ್.ಮಚ್ಚಾಡೊ ಎಚ್ಚರಿಸಿದ್ದಾರೆ.