ಮಡಿಕೇರಿ, ಏ. 5 : ಇತ್ತೀಚೆಗೆ ನಿಧನರಾದ ಜಿಲ್ಲಾ ಕಾಂಗ್ರೆಸ್‍ನ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಜೆ.ಎ.ಕರುಂಬಯ್ಯ ಅವರ ಗೌರವಾರ್ಥ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಹಿರಿಯರಾದ ಕರುಂಬಯ್ಯ ಅವರು ಒಬ್ಬ ವ್ಯಕ್ತಿಯಾಗಿರದೆ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಗಿದ್ದರು ಎಂದು ಬಣ್ಣಿಸಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುನಿಲ್ ಪತ್ರಾವೊ, ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸಂಪಾಜೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಕೆಪಿಸಿಸಿ ಸದಸ್ಯ ಜೋಸೆಫ್ ಶ್ಯಾಂ, ಆರ್‍ಜಿಪಿಆರ್‍ಎಸ್ ಸಂಯೋಜಕ ತನ್ನೀರಮೈನಾ, ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮಾನಾಥ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಸುರೇಶ್, ನಗರಸಭೆಯ ಮಾಜಿ ಸದಸ್ಯರುಗಳಾದ ಜುಲೇಕಾಬಿ, ಪ್ರಕಾಶ್ ಆಚಾರ್ಯ, ಫಿಲೋಮಿನಾ ಹಾಗೂ ನಗರ ಮಹಿಳಾ ಘಟಕದ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ಕರುಂಬಯ್ಯ ಅವರಿಗೆ ಪುಷ್ಪನಮನ ಸಲ್ಲಿಸಿದರು.