ಮಡಿಕೇರಿ, ಏ. 5: ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿ.ಪಂ. ಸಿಇಓ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ಮಡಿಕೇರಿ (ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ), ಸಂಪಾಜೆ (ಸಹಾಯಕ ಕಾರ್ಯದರ್ಶಿ (ಆಡಳಿತ), ಭಾಗಮಂಡಲ (ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಮತ್ತು ನಾಪೋಕ್ಲು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು).

ಸುಂಟಿಕೊಪ್ಪ (ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ), ಕುಶಾಲನಗರ (ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ), ಶಾಂತಳ್ಳಿ (ಜಂಟಿ ನಿರ್ದೇಶಕರು, ಕೃಷಿ ಇಲಾಖೆ), ಕೊಡ್ಲಿಪೇಟೆ (ಉಪ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಇಲಾಖೆ), ಶನಿವಾರಸಂತೆ(ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ), ಸೋಮವಾರಪೇಟೆ (ಉಪ ನಿರ್ದೇಶಕರು, ಕೃಷಿ ಇಲಾಖೆ).

ವೀರಾಜಪೇಟೆ (ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ), ಹುದಿಕೇರಿ (ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ), ಅಮ್ಮತಿ (ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ), ಶ್ರೀಮಂಗಲ (ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ), ಪೊನ್ನಂಪೇಟೆ (ಸಹಾಯಕ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಮಡಿಕೇರಿ) ಮತ್ತು ಬಾಳೆಲೆ (ಜಿಲ್ಲಾ ಅಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ). ಇವರನ್ನು ನಿಯೋಜಿಸಲಾಗಿದೆ.