ಮಡಿಕೇರಿ, ಏ. 5: ಮಡಿಕೇರಿಯ ತಿರಿಬೊಳ್‍ಚ ಕೊಡವ ಸಂಘದ ಆಶ್ರಯದಲ್ಲಿ ತಾ. 16ರಂದು ಬೆಳಿಗ್ಗೆ 10ರಿಂದ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ‘ಕೊಡವ ಮಂಗಲತ್ ನೀರ್ ಎಡ್‍ಪಲ್ಲಿ ಮೂಡಿನ ತಡ್‍ತಿತ್ ಆಡ್‍ವೊ’ ಎಂಬ ವಿಷಯದ ಕುರಿತು ವಿಶೇಷ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ಪದ್ಧತಿಗೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿರುವ ಕೆಲವೊಂದು ಸಮಸ್ಯೆಗಳ ಹಿನ್ನೆಲೆಯಲ್ಲಿ ಜನಜಾಗೃತಿಯೊಂದಿಗೆ ಮೂರು ತಾಲೂಕುಗಳಲ್ಲಿ ಅಭಿಪ್ರಾಯ ಕ್ರೋಢೀಕರಿಸಿ ಒಮ್ಮತದ ತೀರ್ಮಾನಕ್ಕೆ ಬರುವ ಉದ್ದೇಶ ದಿಂದ ಈ ಕಾರ್ಯಕ್ರಮ ಆಯೋಜಿಸ ಲಾಗುತ್ತಿದ್ದು, ಜನಾಂಗದ ಆಸಕ್ತರು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಸಂಘದ ಅಧ್ಯಕ್ಷೆ ಉಳ್ಳಿಯಡ ಡಾಟಿ ಪೂವಯ್ಯ ತಿಳಿಸಿದ್ದಾರೆ.