ಮಡಿಕೇರಿ, ಏ. 5: 2018-19 ನೇ ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6-8 ನೇ ತರಗತಿಗಳ) ವೃಂದದ ಖಾಲಿ ಹುದ್ದೆಗಳ್ನು ನೇರ ನೇಮಕಾತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು.

ಪರೀಕ್ಷಾ ಶುಲ್ಕ ಪಾವತಿ ವಿಧಾನಕ್ಕೆ ಸಂಬಂಧಿಸಿದಂತೆ ನೇಮಕಾತಿ ಅಧಿಸೂಚನೆಯಲ್ಲಿ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಶುಲ್ಕ ಪಾವತಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಆನ್‍ಲೈನ್ ಮೂಲಕ ಅಂದರೆ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್ ಹಾಗೂ ಡೆಬಿಟ್ ಕಾರ್ಡ್ ಮೂಲಕ ಮಾತ್ರವೇ ಪಾವತಿಸಬೇಕು. ಇನ್ನಾವದೇ ಸ್ವರೂಪದಲ್ಲಿ ಶುಲ್ಕ ಪಾವತಿತಕ್ಕದ್ದಲ್ಲ ಎಂದು ಓದಿಕೊಳ್ಳುವದು.

ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಕರ್ನಾಟಕ ರಾಜ್ಯ ಪತ್ರಿಕೆಯಲ್ಲಿ ವೀಕ್ಷಿಸಬಹುದು ಅಥವಾ ಉಪ ನಿರ್ದೇಶಕರು (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ, ಇಲ್ಲಿಯ ನೋಡಲ್ ಅಧಿಕಾರಿ ಕಾಶೀನಾಥ್ ಮೊಬೈಲ್ ಸಂಖ್ಯೆ 9449704858 ಇವರನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪೆರಿಗ್ರಿನ್ ಎಸ್.ಮಚ್ಚಾಡೋ ಅವರು ತಿಳಿಸಿದ್ದಾರೆ.