ಮೂರ್ನಾಡು, ಏ. 5 : ಮೂರ್ನಾಡು ವಿದ್ಯಾಸಂಸ್ಥೆಯ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡೆ ಮತ್ತು ಆಟೋಟ ಅಕಾಡೆಮಿ ವತಿಯಿಂದ ಬೇಸಿಗೆ ತರಬೇತಿ ಶಿಬಿರ ತಾ. 8ರಿಂದ 28ರವರೆಗೆ ನಡೆಲಿದೆ. ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ನಡೆಯುವ ಶಿಬಿರದಲ್ಲಿ ಬಾಲಕ ಹಾಗೂ ಬಾಲಕಿಯರಿಗೆ ಹಾಕಿ ಮತ್ತು ಕ್ರಿಕೆಟ್ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ವಿದ್ಯಾಸಂಸ್ಥೆ ದೈಹಿಕ ಶಿಕ್ಷಕ ಅವರೆಮಾದಂಡ ಗಣೇಶ್ ಅವರ ಮೊಬೈಲ್ ಸಂಖ್ಯೆ 9449339336 ಸಂಪರ್ಕಿಸುವಂತೆ ನಿರ್ದೇಶಕ ಪೆಮ್ಮುಡಿಯಂಡ ವೇಣು ಅಪ್ಪಣ್ಣ ತಿಳಿಸಿದ್ದಾರೆ.