ಸುಂಟಿಕೊಪ್ಪ, ಏ. 5: ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗದಲ್ಲಿ ಚುನಾವಣಾ ಆಯೋಗ ಮತ್ತು ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾ ತಂಡದ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನ ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಪಟ್ಟಣದ ವಾಹನ ಚಾಲಕರ ಹಾಗೂ ಆಟೋ ಚಾಲಕರ ಸಂಘದ ವೇದಿಕೆಯ ಬಳಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನದ ಮಹತ್ವ ಕುರಿತು ಜಾಗೃತಿಯನ್ನು ಬೀದಿ ನಾಟಕ ಪ್ರದರ್ಶಿಸುವ ಮೂಲಕ ಸಾರ್ವಜನಿಕರಲ್ಲಿ ಆರಿವು ಮೂಡಿಸಲಾಯಿತು.
ಈ ಸಂದರ್ಭ ಗ್ರಾ.ಪಂ. ಕಾರ್ಯದರ್ಶಿ ಶ್ರೀಧರ್, ಬಿಲ್ಕಲೆಕ್ಟರ್ ಪುನಿತ್, ಸುರೇಶ್, ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾ ತಂಡದ ಕಲಾವಿದರು ಇದ್ದರು.