ಮಡಿಕೇರಿ, ಏ.5 : ಲೋಕಸಭಾ ಸಾರ್ವತ್ರಿಕ ಚುನಾವಣೆ-2019ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10-ಬಿ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರ ಚಲಾಯಿಸಿ ತಾ. 16 ರ ಸಂಜೆ 6 ಗಂಟೆಯಿಂದ ತಾ. 18 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿದಧ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಸ್ಟಾರ್ ಹೋಟೆಲ್ ಮುಂತಾದವಗಳಲ್ಲಿ ಎಲ್ಲಾ ವಿದಧ ಮದ್ಯಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.