ಮಡಿಕೇರಿ, ಏ.5 : ನಗರದ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಪಾಲಿಬೆಟ್ಟ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವದರಿಂದ ತಾ. 8 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಪಾಲಿಬೆಟ್ಟ, ಚೆನ್ನಂಗಿಹುಂಡಿ, ಹೊಳಮಳ, ಮೇಕೂರು ಚೆನ್ನಯ್ಯನಕೋಟೆ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.