ಮಡಿಕೇರಿ, ಏ. 7: ಮಡಿಕೇರಿಯ ಕೊಡವ ಸಮಾಜ ಸಭಾಂಗಣದಲ್ಲಿ ಕೊಡವ ಸಮಾಜ ಪೆÇಮ್ಮಕ್ಕಡ ಒಕ್ಕೂಟದ 3ನೇ ವಾರ್ಷಿಕೋತ್ಸವ ನಡೆಯಿತು. ತಿರಿ ಬೊಳಚ ಕೊಡವ ಸಂಘದ ಅಧ್ಯಕ್ಷೆ ಹಾಗೂ ಬ್ರಹ್ಮಗಿರಿ ಪತ್ರಿಕೆಯ ಉಪಸಂಪಾದಕಿ ಉಳ್ಳಿಯಡ ಡಾಟಿ ಪೂವಯ್ಯ ಕಾರ್ಯಕ್ರಮ ಉದ್ಘಾಟಿಸಿದರು.
ಕೊಡವ ಸಮಾಜ ಪೆÇಮ್ಮಕ್ಕಡ ಒಕ್ಕೂಟದ ಸ್ಥಾಪಕಾಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಮಾತನಾಡಿದರು. ಬರಹಗಾರ್ತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಅವರು ಪೆÇಮ್ಮಾಲೆ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.
ಇದೇ ಸಂದರ್ಭ ಅಂಬಿಕಾತನ ಯದತ್ತ ಬರೆದಿರುವ ‘ಇಳಿದು ಬಾ ತಾಯಿ’ ಎಂಬ ಹಾಡಿನ ಮೂಲಕ ಮಳೆರಾಯನಿಗೆ ಧರೆಗೆ ಬರುವಂತೆ ಪ್ರೀತಿಯ ಆಹ್ವಾನ ನೀಡಿದರು. ಒಕ್ಕೂಟದ ಕಾರ್ಯದರ್ಶಿ ಬೊಳ್ಳಜಿರ ಯಮುನಾ ಅಯ್ಯಪ್ಪ ಸಂಘದ ಆಡಳಿತ ವರದಿ ವಾಚಿಸಿದರು. ಒಕ್ಕೂಟದ ಖಜಾಂಜಿ ಉಳ್ಳಿಯಡ ಸಚಿತಾ ಗಂಗಮ್ಮ ಲೆಕ್ಕ ಪತ್ರ ಮಂಡನೆ ಮಾಡಿದರು. ಬೊಪ್ಪಂಡ ಸರಳ ಮತ್ತು ತಂಡದವರು ಪ್ರಾರ್ಥನಾ ಗೀತೆ ಹಾಡಿದರು. ಚೋಕಿರ ಅನಿತಾ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಬರಹಗಾರ ರಾದ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಬರಹಗಾರ್ತಿ ಕೂಪದಿರ ಸುಂದರಿ ಮಾಚಯ್ಯ ಮತ್ತಿತರರು ಇದ್ದರು.