ಮಡಿಕೇರಿ, ಏ. 7: ಜಿಲ್ಲಾ ಅಬಕಾರಿ ಇಲಾಖೆಯ ವತಿಯಿಂದ ವಿವಿಧ ಕಡೆ ದಾಳಿ ನಡೆಸಿದ್ದು, ಗುಡುಗಳಲೆ ಕಡೆಯಿಂದ ಹುಲುಸೆ ಕಡೆಗೆ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಓರ್ವ ಪರಾರಿಯಾಗಿ ದ್ದಾನೆ. ದ್ವಿಚಕ್ರ ವಾಹನವನ್ನು ಪರಿಶೀಲಿಸಿದಾಗ 17.280 ಲೀ. ಮದ್ಯವಿರುವದು ಕಂಡು ಬಂದಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯ ಮತ್ತು ವಾಹನವನ್ನು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ (ಕಲಂ 15ಎ) 9 ಪ್ರಕರಣಗಳು ಹಾಗೂ ಸನ್ನದುಗಳ ಮೇಲೆ 5 ಸಾಮಾನ್ಯ ಪ್ರಕರಣ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸ ಲಾಗಿದೆ.