ವೀರಾಜಪೇಟೆ, ಏ. 7: ಜನರು ರಕ್ತಹೀನತೆ ಮತ್ತು ಅಪಘಾತದಿಂದ ಗಾಯಗೊಂಡು ಸಕಾಲದಲ್ಲಿ ರಕ್ತದೊರಕದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಮಡಿಕೇರಿಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕೆ.ಪಿ. ಕರುಂಬಯ್ಯ ಹೇಳಿದರು. ವೀರಾಜಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಗೋಣಿಕೊಪ್ಪಲಿನ ಲಯನ್ಸ್ ಸಂಸ್ಥೆಯ ಸಂಯೋಜನೆಯಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಡಾ. ಕೆ.ಪಿ. ಕರುಂಬಯ್ಯ ರಕ್ತದಾನದ ಮಹತ್ವದ ಕುರಿತು ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲಿನ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಪುತ್ತಾಮನೆ ಸ್ಮರಣ್, ಕಾಲೇಜಿನ ಪ್ರಾಂಶುಪಾಲೆ ಪ್ರೊ. ಎ.ಎಂ. ಕಮಲಾಕ್ಷಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಡಾ. ಆನಂದ್ ಕಾರ್ಲ ಹಾಗೂ ಹೆಚ್.ವಿ. ನಾಗರಾಜು ಹಾಜರಿದ್ದರು.