ಮಡಿಕೇರಿ, ಏ. 8: ನಗರದಲ್ಲಿ ಸುಗಮ ಸಾರಿಗೆ ಸಂಚಾರ ಕಲ್ಪಿಸುವದು, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವದು, ಕುಡಿಯುವ ನೀರು ಸಮರ್ಪಕ ಪೂರೈಕೆ ಮತ್ತಿತರ ಸಂಬಂಧ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೋಮವಾರ ನಗರ ಸಂಚಾರ ಕೈಗೊಂಡಿದ್ದರು.
ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತ, ಮೂರ್ನಾಡು ರಸ್ತೆ, ಖಾಸಗಿ ಬಸ್ ನಿಲ್ದಾಣದ ರಸ್ತೆ, ಅಂಚೆ ಕಚೇರಿ ರಸ್ತೆ, ಚೌಕಿ, ಗಣಪತಿ ಬೀದಿ, ಮಹದೇವಪೇಟೆ, ಮಾರುಕಟ್ಟೆ ರಸ್ತೆ, ರಾಜಾಸೀಟು ರಸ್ತೆ ಮತ್ತಿತರ ವೀಕ್ಷಣೆ ಮಾಡಿದರು.
ಜೊತೆಗೆ ಕಸ ಸಂಸ್ಕರಣಾ ಘಟಕ ಹಾಗೂ ಕುಡಿಯುವ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ನಗರದಲ್ಲಿ ಸುಗಮ ಸಾರಿಗೆ ಸಂಚಾರ ಸಂಬಂಧ ಹಾಗೂ ವಾಹನ ನಿಲುಗಡೆ, ಕಸ ಸಂಸ್ಕರಣೆ, ನಿರ್ವಹಣೆ ಹಾಗೂ ವಿಲೇವಾರಿ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಎಂ.ಎಲ್. ರಮೇಶ್, ಇಂಜಿನಿಯರ್ಗಳಾದ ನಾಗರಾಜು, ವನಿತಾ, ಪ್ರಾದೇಶಿಕ ಸಾರಿಗೆ ವ್ಯವಸ್ಥಾಪಕ ಶಿವಣ್ಣ ಇತರರು ಇದ್ದರು.