ಸೋಮವಾರಪೇಟೆ,ಏ.8: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಪರ ಸೋಮವಾರಪೇಟೆಯಲ್ಲಿ ತಾ. 9ರಂದು (ಇಂದು) ಚುನಾವಣಾ ಪ್ರಚಾರ ಕಾರ್ಯ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ತಿಳಿಸಿದ್ದಾರೆ.

ಮೈತ್ರಿ ಪಕ್ಷದ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್, ಚುನಾವಣಾ ಉಸ್ತುವಾರಿಗಳಾದ ಹೆಚ್.ಸಿ. ಮಹದೇವಪ್ಪ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಪಕ್ಷದ ಉಸ್ತುವಾರಿ ವೆಂಕಪ್ಪ ಗೌಡ, ಮಂಜುಳಾ ರಾಜು ಸೇರಿದಂತೆ ಇತರ ಮುಖಂಡರುಗಳು ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಚಾರ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಪಟ್ಟಣದಲ್ಲಿ, 4 ಗಂಟೆಗೆ ಶನಿವಾರಸಂತೆ, ದುಂಡಳ್ಳಿ, ಸಂಜೆ 6 ಗಂಟೆಗೆ ಹಾನಗಲ್ಲು, 7 ಗಂಟೆಗೆ ಬೇಳೂರು ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಲೋಕೇಶ್ ಮಾಹಿತಿ ನೀಡಿದ್ದಾರೆ.