ಸೋಮವಾರಪೇಟೆ, ಏ. 8: ತ್ರೀವಿಧ ದಾಸೋಹದೊಂದಿಗೆ ಲಕ್ಷಾಂತರ ಮಂದಿಯ ಬಾಳಿಗೆ ಬೆಳಕಾದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಕಂಡಿದ್ದ ಕನಸನ್ನು ಸಾಕಾರ ಗೊಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಸವಪಟ್ಟಣದ ತೊಂಟದಾರ್ಯ ಸಂಸ್ಥಾನ ಮಠಾಧೀಶ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ ನುಡಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ವೀರಶ್ವೆವ ಸಮಾಜ, ಅಕ್ಕನ ಬಳಗ, ಬಸವೇಶ್ವರ ಯುವಕ ಸಂಘ ಅವರುಗಳ ಸಂಯುಕ್ತ ಆಶ್ರಯದÀಲ್ಲಿ ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಆಯೋಜಿಸಿದ್ದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ 112ನೇ ಜನ್ಮ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಮಾತನಾಡಿ, ಶಿವಕುಮಾರ ಸ್ವಾಮೀಜಿಗಳಂತೆ ಬದುಕು ಸಮಾಜಮುಖಿ ಯಾಗಿರಬೇಕು ಎಂದರು. ಮನೆಹಳ್ಳಿ ತಪೋವನ ಮಠಾಧೀಶ ಶಿವಲಿಂಗ ಸ್ವಾಮೀಜಿ, ಶಿಡಿಗಳಲೆ ಮಠಾಧೀಶ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಸ್. ಮಹೇಶ್, ವೀರಶೈವ ಸಮಾಜದ ಅಧ್ಯಕ್ಷ ಕೆ.ಎನ್. ಶಿವಕುಮಾರ್, ಕಾರ್ಯದರ್ಶಿ ಜೆ.ಸಿ. ಶೇಖರ್, ಅಕ್ಕನ ಬಳಗದ ಅಧ್ಯಕ್ಷೆ ಜಲಜಾ ಶೇಖರ್ ಇದ್ದರು. ಕಾರ್ಯಕ್ರಮದ ಅಂಗವಾಗಿ ಮಳೆ ಮತ್ತು ಲೋಕ ಕಲ್ಯಾಣಕ್ಕಾಗಿ ವಿಶೇಷ ಪೂಜೆ ನಡೆಯಿತು.