ಭಾಗಮಂಡಲ, ಏ. 8: ಇಲ್ಲಿನ ಶ್ರೀರಾಮಸೇವಾ ಟ್ರಸ್ಟ್ ವತಿಯಿಂದ ರಾಮನವಮಿ ಉತ್ಸವ ವಿಜೃಂಭಣೆ ಯಿಂದ ಜರುಗುತ್ತಿದೆ. ತಾ. 6ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡು ರಾಮಮಂದಿರದಲ್ಲಿ ಪ್ರತಿದಿನ ಸಂಜೆ 6.30ರಿಂದ ಪೂಜೆ, ಭಜನೆ, ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ರಾಮನವಮಿ ಉತ್ಸವವನ್ನು ಆಚರಿಸಲಾಗುವದು. ರಾಮನವಮಿ ಬಳಿಕ ಶಿಥಿಲಾವಸ್ಥೆಗೆ ತಲುಪಿರುವ ಶ್ರೀರಾಮಮಂದಿರದ ಪುನರ್‍ನಿರ್ಮಾಣ ಕಾರ್ಯ ನಡೆಯುತ್ತದೆ.
ಉತ್ಸವದ ಅಂಗವಾಗಿ ತಾ. 13ರಂದು ರಾತ್ರಿ 8 ಗಂಟೆಗೆ ಶ್ರೀರಾಮ ದೇವರನ್ನು ವಿದ್ಯುತ್ ಅಲಂಕೃತ ಮಂಟಪದಲ್ಲಿ ವಾದ್ಯಗೋಷ್ಠಿಯೊಂದಿಗೆ ಮುಖ್ಯಬೀದಿಯಲ್ಲಿ ಮೆರವಣಿಗೆ ನಡೆಸಲಾಗುವದು. ತಾ. 14ರಂದು ಓಕುಳಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಶ್ರೀರಾಮ ಮಂದಿರದಿಂದ ಹೊರಟು ಮುಖ್ಯ ಬೀದಿಯಲ್ಲಿ ಮೆರವಣಿಗೆಯಲ್ಲಿ ತೊಡಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಬಳಿಕ ಮಹಾಪೂಜೆ ನಡೆಯಲಿದೆ. ಪ್ರತಿದಿನ ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು ಶಾಲಾ ವಿದ್ಯಾರ್ಥಿಗಳಿಗೆ ರಂಗೋಲಿ, ಜನಪದಗೀತೆ ಹಾಗೂ ನೃತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.