ಸಿದ್ದಾಪುರ, ಏ. 10: ಜೆ.ಡಿ.ಎಸ್. ಪಕ್ಷದ ಗೌರವ ಅಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿ, ಜೆ.ಡಿ.ಎಸ್. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೆಗೌಡ ಅವರ ಮಾರ್ಗದರ್ಶನದಂತೆ ರಾಜ್ಯಾಧ್ಯಕ್ಷರು ಕೊಡಗು ಜಿಲ್ಲಾ ಜೆ.ಡಿ.ಎಸ್. ಜಿಲ್ಲಾ ಅಧ್ಯಕ್ಷರಾಗಿ ಕೆ.ಎಂ. ಗಣೇಶ್ ಅವರನ್ನು ಆಯ್ಕೆಗೊಳಿಸಿದ್ದಾರೆ. ಈ ಹಿನ್ನೆಲೆ ಪಕ್ಷದ ಕಾರ್ಯಕರ್ತರು ಯಾವದೇ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಳ್ಳದೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು.

ಜಿಲ್ಲಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಐದು ತಾಲೂಕುಗಳ ಅಧ್ಯಕ್ಷರುಗಳನ್ನು ನೇಮಕ ಮಾಡಿ. ಹಿರಿಯ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶವನ್ನು ನೀಡಿದ್ದಾರೆ ಎಂದು ತಿಳಿಸಿದರು.

ಸಮಿತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಗಣೇಶ್, ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ತೊಡಗಿಸಿಕೊಂಡು ಪಕ್ಷವನ್ನು ಬೂತ್ ಮಟ್ಟದಿಂದ ಬಲಪಡಿಸಬೇಕು. ಕಾರ್ಯಕರ್ತರಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷವನ್ನು ಬೆಳಸಬೇಕು. ಮುಂಬರುವ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ವಿಜಯಶಂಕರ್ ಅವರನ್ನು ಜಯಶೀಲರನ್ನಾಗಿ ಮಾಡಲು ಪಣತೊಡಬೇಕು ಎಂದÀರು.

ಕೊಂಡಂಗೇರಿ-ಹಾಲುಗುಂದ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ

ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಕೇತ್ ಪೂವಯ್ಯ, ಕಳೆದ ಐದು ವರ್ಷಗಳಿಂದ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರು ಜಿಲ್ಲೆಯ ಯಾವದೇ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ ಎಂದರು. ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷ ನಡೆಯುತಿದ್ದರೂ ಕೂಡ ಮಂತ್ರಿಮಂಡಲದ ಗಮನ ಸಳೆಯುವಲ್ಲಿ ಸಂಸದರು ವಿಫಲರಾಗಿದ್ದಾರೆ. ಅಲ್ಲದೆ ಕಾಡಾನೆ ಕಾರ್ಯಾಚರಣೆ ನಡೆಸಲು ಕೇಂದ್ರದಿಂದ ಅನುಮತಿ ಪಡೆಯಲು ಹಾಗೂ ಶಾಶ್ವತ ಕಂದಕ ನಿರ್ಮಾಣದ ಯೋಜನೆಯನ್ನು ಜಾರಿಗೆ ತರುವಲ್ಲಿ ನಿರ್ಲಕ್ಷ ವಹಿಸಿದ್ದಾರೆ ಎಂದು ದೂರಿದರು.

ಸಭೆಯಲ್ಲಿ ಜೆ.ಡಿಎಸ್. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಖಾನ್, ಮಹಿಳಾ ಘಟಕದ ಅಧ್ಯಕ್ಷೆ ಅಪ್ಪನೆರವಂಡ ಶಾಂತಿ ಅಚ್ಚಪ್ಪ, ಪಕ್ಷದ ಪ್ರಮುಖರಾದ ಎಸ್.ಹೆಚ್. ಮತೀನ್, ಯೂಸಫ್, ಇಬ್ರಾಹಿಂ, ಸುನೀಲ್, ಜಾಸಿರ್, ಡೆನ್ನಿ ಬೊರೂಸ್, ಕುಸುಮಾವತಿ ಮತ್ತು ಇತರರು ಹಾಜರಿದ್ದರು.