ಕುಶಾಲನಗರ, ಏ. 9: ಕುಶಾಲನಗರ ಸಂತೆ ಮಾರುಕಟ್ಟೆ ವ್ಯಾಪ್ತಿಯಲ್ಲಿ ಸಂಚಾರ ವ್ಯವಸ್ಥೆಗೆ ಅಡ್ಡಿಯುಂಟು ಮಾಡುತ್ತಿದ್ದ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ಸ್ಥಳೀಯ ಪೊಲೀಸರು ನಡೆಸಿ ಸಮರ್ಪಕ ಸಂಚಾರ ವ್ಯವಸ್ಥೆಗೆ ಅವಕಾಶ ಕಲ್ಪಿಸಿದರು. ಸಂತೆ ದಿನವಾದ ಮಂಗಳವಾರ ಮಾರುಕಟ್ಟೆ ರಸ್ತೆಯ ಹೆದ್ದಾರಿ ಎರಡೂ ಬದಿಗಳಲ್ಲೂ ವ್ಯಾಪಾರಿಗಳು ಮಾರಾಟ ಮಾಡುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ನೇತೃತ್ವದಲ್ಲಿ ಸ್ಥಳೀಯ ಪೊಲೀಸರು ತೆರವು ಕಾರ್ಯಾಚರಣೆ ನಡೆಸಿದರು. ತೆರವು ಕಾರ್ಯಾಚರಣೆಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಠಾಣಾಧಿಕಾರಿ ಅರ್ಚನಾ ಸೇರಿದಂತೆ ಸಂಚಾರಿ ಪೊಲೀಸರು ಪಾಲ್ಗೊಂಡಿದ್ದರು.