ಶನಿವಾರಸಂತೆ, ಏ. 9: ಇಲ್ಲಿನ ಗುಡುಗಳಲೆ ಜಯದೇವ ಜಾತ್ರಾ ಮೈದಾನದಲ್ಲಿ ಇರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಮಳೆಗಾಗಿ ಹೋಮ, ಹವನ ಹಾಗೂ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ಬೆಳೆಗಾರರು, ರೈತರು ಕಂಗಾಲಾಗಿ ಮಳೆಗಾಗಿ ದೇವರಲ್ಲಿ ಮೊರೆಯಿಡುತ್ತಿ ದ್ದಾರೆ. ಮಳೆ ನಿಮಿತ್ತ ದೇವಾಲಯದಲ್ಲಿ ನಡೆದ ವಿಶೇಷ ಪೂಜೆ, ಪ್ರಾರ್ಥನೆ ಯಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಶಿಡಿಗಳಲೆ ಮಠದ ಇಮ್ಮಡಿ ಶಿವಲಿಂಗ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಅರ್ಚಕ ಬಸವಶಾಸ್ತ್ರಿ, ಸೋಮಶೇಖರ್ ಶಾಸ್ತ್ರಿ ಹಾಗೂ ಶಿವಕುಮಾರ್ ಪೂಜಾ ವಿಧಿಗಳನ್ನು ನೆರವೇರಿಸಿದರು.

ದೇವಾಲಯ ಸಮಿತಿ ಕಾರ್ಯದರ್ಶಿ ಎಸ್.ಎಂ. ಉಮಾಶಂಕರ್, ಸದಸ್ಯರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ವೀರಶೈವ ಸಮಾಜದ ಅಧ್ಯಕ್ಷ ಕೆ.ಬಿ. ಹಾಲಪ್ಪ, ಮುಖಂಡರಾದ ಡಿ.ಬಿ. ಸೋಮಪ್ಪ, ಜಿ.ಎಂ. ಕಾಂತರಾಜ್ ಹಾಗೂ ಇತರರು ಉಪಸ್ಥಿತರಿದ್ದರು.