ಅಮ್ಮತ್ತಿ, ಏ. 10: ಸಮೀಪದ ಬಿಳುಗುಂದ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ವಿಶೇಷ ಚೇತನರಿಗೆ ಮತದಾನದ ಕುರಿತು ಅರಿವು ಜಾಗೃತಿ ಕಾರ್ಯಕ್ರಮ ನಡೆಯಿತು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿಶೇಷಚೇತನರು ಮತ ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಏರ್ಪಡಿಸಲಾಯಿತು. ಪಿ.ಎ. ಅಬ್ದುಲ್ ಮಜೀದ್ ಅವರು ಸ್ವಾಗತಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತನಾಡಿ, ಚುನಾವಣೆ ಮತ್ತು ಮತದಾನದ ಮಹತ್ವದ ಕುರಿತು ಸಭೆಯಲ್ಲಿದ್ದವರಿಗೆ ಮಾಹಿತಿ ನೀಡಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಸಿರಾಜುದ್ದೀನ್ ಮಾತನಾಡಿ, ಸರ್ಕಾರ ಈಗಾಗಲೇ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ದೇಶದ ವಿವಿಧೆಡೆಯಲ್ಲಿ ನಡೆಸುತ್ತಿದ್ದು, ಈ ಗ್ರಾಮದ ವಿಶೇಷಚೇತನರಿಗೆ ಮತ ದಾನದ ಕುರಿತು ಜಾಗೃತಿ ಮೂಡಿ ಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.