ಮಡಿಕೇರಿ, ಏ. 10: ಅಶೋಕಪುರದ ಸಂತೋಷ್ ಯುವಕ ಸಂಘ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ ಸಮಿತಿ ವತಿಯಿಂದ ತಾ. 14 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುವದು.

ಅಂದು ಬೆಳಿಗ್ಗೆ 10 ಗಂಟೆಗೆ ಜನರಲ್ ತಿಮ್ಮಯ್ಯ ವೃತ್ತದಿಂದ ಅಶೋಕಪುರದವರೆಗೆ ಮೆರವಣಿಗೆ ಏರ್ಪಡಿಸಲಾಗಿದೆ. ನಂತರ ಸಂಜೆ 5 ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.