ಮಡಿಕೇರಿ, ಏ. 10: ಕಾಲೂರು ಗ್ರಾಮದಲ್ಲಿ ಮಿನಿಲಾರಿಯೊಂದರಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದುದನ್ನು ಡಿಸಿಐಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಮರಳು ತುಂಬಿಕೊಂಡು ಸಾಗಿಸುತ್ತಿದ್ದ ಮಿನಿಲಾರಿ (ಕೆಎ 21- ಬಿ-2407) ಅನ್ನು ವಶಕ್ಕೆ ಪಡೆದಿದ್ದು, ಮರಳು ಸಾಗಿಸುತ್ತಿದ್ದ ಹರೀಶ್, ಆಲಿ ಮತ್ತು ಷರೀಫ್ ಎಂಬವರುಗಳ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಅಧೀಕ್ಷಕರಾದ ಡಾ. ಸುಮನ್ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ ಇನ್ಸ್‍ಪೆಕ್ಟರ್ ಕೆ. ನಾಗೇಶ್ ಮಡಿಕೇರಿ ಗ್ರಾಮಾಂತರ ಠಾಣಾ ಪಿಎಸ್‍ಐ ಚೇತನ್, ಎ.ಎಸ್.ಐ. ಕೆ.ವೈ. ಹಮೀದ್, ಸಿಬ್ಬಂದಿಗಳಾದ ಕೆ.ಎಸ್. ಅನಿಲ್ ಕುಮಾರ್, ವಿ.ಜಿ. ವೆಂಕಟೇಶ್, ಬಿ.ಎಲ್. ಯೋಗೇಶ್ ಕುಮಾರ್, ಕೆ.ಆರ್. ವಸಂತ, ಎಂ.ಎನ್. ನಿರಂಜನ್ ಮತ್ತು ಶಶಿಕುಮಾರ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ತೀರ್ಥಕುಮಾರ್, ದಿನೇಶ್ ಮತ್ತು ಅರುಣ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.