ಮಡಿಕೇರಿ, ಏ. 10: ಪ್ರಜಾಪ್ರಭುತ್ವದ ರಕ್ಷಣೆಗಾಗಿ ಈ ಬಾರಿ ಕೊಡಗಿನ ಮತದಾರರು ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಅವರಿಗೆ ಬಹುಮತ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಐವನ್ ಡಿಸೋಜ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಡಿಕೇರಿಯಲ್ಲಿ ಮೈತ್ರಿ ಪಕ್ಷಗಳ ಕಚೇರಿಯಲ್ಲಿ ಕಾರ್ಯಕರ್ತ ರನ್ನುದ್ದೇಶಿಸಿ ಮಾತನಾಡಿದ ಅವರು, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಎಂದು ಕರೆ ನೀಡಿದರು. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾóಕ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಇ. ಮ್ಯಾಥ್ಯು, ಕೆಪಿಸಿಸಿ ಸದಸ್ಯೆ ಜೋಸೆಫ್ ಶ್ಯಾಮ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಯೋಜಕ ಎಂ.ಎ. ಉಸ್ಮಾನ್, ತಾ.ಪಂ. ಸದಸ್ಯೆ ಆಶಾ ಜೇಮ್ಸ್, ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಿಯುಷ್ ಮೊಂತೇರೋ, ಸಾಮಾಜಿಕ ಜಾಲತಾಣದ ಸಂಚಾಲಕ ಸೂರಜ್ ಹೊಸೂರು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನೀರ ಮೈನಾ ಹಾಗೂ ಇತರರು ಹಾಜರಿದ್ದರು.