ಮಡಿಕೇರಿ, ಏ. 10: ಗೋಣಿಕೊಪ್ಪದ ಕಾವೇರಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ 2018-19ನೇ ಸಾಲಿನ ಕಾರ್ಯಚಟುವಟಿಕೆಗಳ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂಪನ್ಮೂಲ ವ್ಯಕ್ತಿ ಪ್ರಸನ್ ಕುಮಾರ್ ಮಾತನಾಡಿ, ಯುವಜನಾಂಗ ಮೊಬೈಲ್ ಬಳಕೆ ಹಿಂದೆ ಇದ್ದು ಕೌಶಲ್ಯ ಕಡೆ ಗಮನ ಹರಿಸದೆ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಹಾತ್ಮ ಗಾಂಧಿ ಗುಡಿ ಕೈಗಾರಿಕೆ ಬಳಕೆ ತಿಳಿಸಿ ಪ್ರತಿಯೊಬ್ಬರೂ ತಮ್ಮ ತಮ್ಮ ಆದಾಯವನ್ನು ತಾವೇ ರೂಪಿಸಿಕೊಳ್ಳುವಂತೆ ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾವೇರಿ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಕೆ.ಜಿ. ಉತ್ತಪ್ಪ ಮಾತನಾಡಿ, ಕೊಡಗಿನ ಪ್ರಕೃತಿ ವಿಕೋಪದಲ್ಲಿ ಸೇವೆ ಸಲ್ಲಿಸಿದ ಎಲ್ಲರನ್ನು ಅಭಿನಂದಿಸಿ ಸ್ವಯಂ ಸೇವಕರು ಇಂತಹ ತುರ್ತು ಸಂದರ್ಭದಲ್ಲಿ ಸೇವೆ ಮಾಡಲು ಸದಾ ಸಿದ್ಧರಿರಬೇಕು ಎಂದು ತಿಳಿಸಿದರು. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಯುವಜನಾಂಗ ಬದಲಾವಣೆಯತ್ತ ಸಾಗುತ್ತಿದ್ದು, ಹುಲ್ಲು ಮನೆ ಇರುವವರಿಗೆ ಕಟ್ಟಡ ಬೇಕಾಗಿದೆ, ಕಟ್ಟಡ ಇರುವವರಿಗೆ ಹುಲ್ಲಿನ ಗುಡಿ ಬೇಕಾಗಿದೆ ಅದಕ್ಕೆ ಅಧಿಕ ಹಣ ಕೊಟ್ಟು ರೆಸಾರ್ಟ್‍ಗಳಿಗೆ ಜನ ಬರುತ್ತಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಉಷಾಲತ ವಹಿಸಿದ್ದರು. ಎನ್.ಎಸ್.ಎಸ್. ಯೋಜನಾಧಿಕಾರಿ ರೀತಾ ಎನ್.ಪಿ. ಸ್ವಾಗತಿಸಿ, ವನಿತ್‍ಕುಮಾರ್ ಎಂ.ಎನ್. ವಂದಿಸಿದರು. ವಿದ್ಯಾರ್ಥಿಗಳಾದ ಅಂಜುಶ ಮತ್ತು ಕಾವೇರಮ್ಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು.