ಸಿದ್ದಾಪುರ, ಏ. 9: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮೋದಿ-ಯುವಜನ ವಿರೋಧಿ ಜಾಥಾ ಸಿದ್ದಾಪುರ ಬಸ್ ನಿಲ್ದಾಣಕ್ಕೆ ಆಗಮಿಸಿ ಸಭೆ ನಡೆಸಲಾಯಿತು. ಸಭೆಯಲ್ಲಿ ಕರಿಕೆ ಗ್ರಾ.ಪಂ. ಅಧ್ಯಕ್ಷ ಬಾಲಚಂದ್ರ ನಾಯರ್ ಮಾತನಾಡಿ, ಕೇಂದ್ರದಲ್ಲಿ ಕಳೆದ ಐದು ವರ್ಷದ ಆಡಳಿತದಲ್ಲಿ ಬಡವರ ದೈನಂದಿನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದು ಟೀಕಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸಂಪಾಜೆ, ತೆನ್ನೀರ ಮೈನಾ, ಜೆಮ್ಮಡ ಸೋಮಣ್ಣ ಇನ್ನಿತರರು ಹಾಜರಿದ್ದರು.