ಮಡಿಕೇರಿ, ಏ. 11: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಅವರ ಪರ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ನಗರದ 29 ಬೂತ್‍ಗಳಲ್ಲಿ ಮತ ಯಾಚಿಸಿತು.
ಪ್ರಚಾರ ಕಾರ್ಯದ ನೇತೃತ್ವ ವಹಿಸಿದ್ದ ಪಕ್ಷದ ನಗರಾಧ್ಯಕ್ಷ ಕೆ.ಯು. ಅಬ್ದುಲ್ ರಜಾóಕ್ ಮಾತನಾಡಿ, ಮಡಿಕೇರಿ ನಗರದಲ್ಲಿ ಮೈತ್ರಿ ಅಭ್ಯರ್ಥಿಗೆ ಅತ್ಯಧಿಕ ಮತಗಳು ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಸದಸ್ಯ ಟಿ.ಪಿ. ರಮೇಶ್, ರಾಜ್ಯ ಅಲ್ಪಸಂಖ್ಯಾತರ ಘಟಕದ ಸಂಯೋಜಕ ಎಂ.ಎ. ಉಸ್ಮಾನ್, ಪ್ರಮುಖರಾದ ಟಿ.ಎಂ. ಅಯ್ಯಪ್ಪ, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ಸುರಯ್ಯ ಅಬ್ರಾರ್, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಇ.ಮ್ಯಾಥ್ಯ್, ಮಡಿಕೇರಿ ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಮಡಿಕೇರಿ ಬ್ಲಾಕ್ ಅಧ್ಯಕ್ಷೆ ಶಶಿ, ಉಪಾಧ್ಯಕ್ಷೆ ಸ್ವರ್ಣಲತಾ, ಮೊಣ್ಣಪ್ಪ ಕಾನೆಹಿತ್ಲು, ನಗರಸಭಾ ಮಾಜಿ ಸದಸ್ಯ ಚುಮ್ಮಿ ದೇವಯ್ಯ, ಟಿ.ಹೆಚ್. ಉದಯಕುಮಾರ್ ಹಾಗೂ ಕಾರ್ಯಕರ್ತರು ಈ ಸಂದರ್ಭ ಹಾಜರಿದ್ದರು.