ಸುಂಟಿಕೊಪ್ಪ, ಏ.11: ಸುಂಟಿಕೊಪ್ಪದ ಶ್ರೀ ಕೋದಂಡರಾಮ ದೇವಾಲಯದಲ್ಲಿ ರಾಮ ನವಮಿ ಪ್ರಯುಕ್ತ ತಾ.13 ರಂದು ವಿಶೇಷ ಪೂಜೆ ವಿಶ್ವ ಹಿಂದೂ ಪರಿಷದ್ ಮತ್ತು ಶ್ರೀ ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಬಿ.ಎಂ.ಸುರೇಶ್ ತಿಳಿಸಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ಗಣಪತಿ ಹೋಮ, ಹವನ, ರಾಮತಾರಕ ಹೋಮ, ಮಧ್ಯಾಹ್ನ 1 ಗಂಟೆಗೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.