ಗೋಣಿಕೊಪ್ಪ ವರದಿ, ಏ. 11: ದಲಿತ ಸಂಘರ್ಷ ಸಮಿತಿ ವತಿಯಿಂದ ತಾ. 14 ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಹಲವು ಕಾರ್ಯ ಕ್ರಮಗಳನ್ನು ಆಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ವಿಭಾಗೀಯ ಸಂಚಾಲಕ ಕೃಷ್ಣಪ್ಪ ತಿಳಿಸಿದ್ದಾರೆ. ಅಂದು ಗೋಣಿಕೊಪ್ಪ ಸ್ವಾತಂತ್ರ್ಯ ಹೋರಾಟ ಗಾರರ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿಷಯ ಮಂಡನೆ, ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಗೋಷ್ಠಿ ಯಲ್ಲಿ ತಿಳಿಸಿದರು. ಬೆಳಿಗ್ಗೆ 10 ಗಂಟೆಗೆ ಆರ್‍ಎಂಸಿ ಆವರಣದಿಂದ ಮೆರವಣಿಗೆ ಮೂಲಕ ಆಗಮಿಸಿ ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಸಲಾಗುವದು. ಬೆ. 11 ಗಂಟೆಗೆ ಆರಂಭವಾಗುವ ಸಭಾ ಕಾರ್ಯಕ್ರಮ ದಲ್ಲಿ ಚಿಂತಕ ಲಕ್ಷ್ಮಣ ಹೊಸಕೋಟೆ ಅಂಬೇಡ್ಕರ್ ಬಗ್ಗೆ ವಿಚಾರ ಮಂಡನೆ ಮಾಡಲಿದ್ದಾರೆ. ರಾಜ್ಯ ಮುಖಂಡರು ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಹೆಚ್.ಆರ್. ಪರಶುರಾಮ್, ಸಂಚಾಲಕರುಗಳಾದ ಮಣಿ, ಕರ್ಕು ಉಪಸ್ಥಿತರಿದ್ದರು.