ಮಡಿಕೇರಿ, ಏ. 11: ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಕೊನೆಯ ಆರು ತಿಂಗಳ ಅವಧಿಯಲ್ಲಿ ಜಿಲ್ಲೆಗೆ ಬಂದು ಹೋಗಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕರ್ನಾಟಕ ಪ್ರಜಾ ಪಾರ್ಟಿಯ ಅಭ್ಯರ್ಥಿ ಪಿ.ಕೆ. ಬಿದ್ದಪ್ಪ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಂಕಷ್ಟಗಳಿಗೆ ಸ್ಪಂದಿಸುವ ಅಭ್ಯರ್ಥಿಯೊಬ್ಬರ ಅಗತ್ಯವಿದ್ದು, ಜಿಲ್ಲೆಯವನೇ ಆದ ತನ್ನನ್ನು ಆಯ್ಕೆ ಮಾಡಿ ಕಳುಹಿಸಿದಲ್ಲಿ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸುವದಾಗಿ ಭರವಸೆ ನೀಡಿದರು.
ಇಂದು ಹಣ, ಹೆಂಡಕ್ಕಾಗಿ ಮತಚಲಾವಣೆಯಾಗುತ್ತಿದ್ದು, ಕ್ಷೇತ್ರದ ಹಿತದೃಷ್ಟಿಯಿಂದ ಮತದಾರರು ಪ್ರಾಮಾಣಿಕರಿಗೆ ಮತ ನೀಡಬೇಕೆಂದು ಮನವಿ ಮಾಡಿದರು.
ಕರ್ನಾಟಕ ಪ್ರಜಾ ಪಾರ್ಟಿಯ ರಾಜ್ಯಾಧ್ಯಕ್ಷ ಡಾ. ಬಿ. ಶಿವಣ್ಣ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾ ಸೇವಕನನ್ನು ಆಯ್ಕೆ ಮಾಡುವ ಸಂದರ್ಭ ಪ್ರಜ್ಞಾವಂತ ಮತÀದಾರರು ಅತೀ ಜಾಗೃತೆಯಿಂದ ತಮ್ಮ ಮತವನ್ನು ಚಲಾಯಿಸಬೇಕಾಗಿದೆ ಎಂದರು.
ಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಸಿ. ಕಾರ್ತಿಕ್, ಮೈಸೂರು ಜಿಲ್ಲಾಧ್ಯಕ್ಷ ಲೋಕೆÉೀಶ್, ನಾಪೋಕ್ಲು ಹೋಬಳಿ ಅಧ್ಯಕ್ಷೆ ಚೋಕಿರ ಹೇಮಾವತಿ ಹಾಗೂ ಎ. ದಿನೇಶ್ ಸುಬ್ಬಯ್ಯ ಉಪಸ್ಥಿತರಿದ್ದರು.