ಸೋಮವಾರಪೇಟೆ, ಏ. 11: ಲೋಕಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಪ್ರತಾಪ್ ಸಿಂಹ ಪರವಾಗಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮತ್ತು ಕಾರ್ಯಕರ್ತರು ಸೋಮವಾರಪೇಟೆಯಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ಇಲ್ಲಿನ ಸಂತೆ ಮಾರುಕಟ್ಟೆಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಅವರು ವ್ಯಾಪಾರಸ್ಥರು, ಗ್ರಾಹಕರಲ್ಲಿ ಮತಯಾಚಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತದಿಂದಾಗಿ ದೇಶಾದ್ಯಂತ ಇಂದು ಮೋದಿ ಪರವಾದ ಅಲೆ ಇದೆ. ಇದರೊಂದಿಗೆ ಸಂಸದ ಪ್ರತಾಪ್ ಸಿಂಹ ಅವರೂ ಸಹ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ದೇಶದ ಸುಭದ್ರತೆ, ಉತ್ತಮ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡುವಂತೆ ರಂಜನ್ ಮನವಿ ಮಾಡಿದರು.
ಈ ಸಂದರ್ಭ ಬಿಜೆಪಿ ಪ್ರಮುಖರಾದ ಸೋಮೇಶ್, ಮನುಕುಮಾರ್, ಕಿಬ್ಬೆಟ್ಟ ಮಧು, ಹುಲ್ಲೂರಿಕೊಪ್ಪ ಚಂದ್ರು, ಮಸಗೋಡು ಸತೀಶ್, ಶರತ್ ಚಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚೌಡ್ಲು ಗ್ರಾಮದಲ್ಲಿ: ಪ್ರತಾಪ್ ಸಿಂಹ ಪರವಾಗಿ ಚೌಡ್ಲು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಮತಯಾಚನೆ ಮಾಡಿದರು. ಸ್ಥಳೀಯ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳನ್ನು ವಿವರಿಸುವ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಗ್ರಾ.ಪಂ. ಸದಸ್ಯರುಗಳಾದ ಧರ್ಮ, ಮಂಜುಳಾ ಸುಬ್ರಮಣಿ, ಬಿಜೆಪಿ ತಾಲೂಕು ಕಾರ್ಯದರ್ಶಿ ಮನುಕುಮಾರ್ ರೈ, ಕಾರ್ಯಕರ್ತರಾದ ಕೃಷ್ಣಮೂರ್ತಿ, ರಘು, ಸುಬ್ರಮಣಿ, ಶ್ರೀಕಾಂತ್, ಮೋಹನ್, ನರೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.