ಮಡಿಕೇರಿ, ಏ. 11: ಮಡಿಕೇರಿ ಮಲ್ಲಿಕಾರ್ಜುನ ನಗರ ಶ್ರೀ ರಾಮಮಂದಿರ ದೇವಾಲಯದಲ್ಲಿ ಶ್ರೀ ರಾಮ ನವಮಿ ಆಚರಣೆಯು ತಾ. 13 ರ ಶನಿವಾರ ನಡೆಯಲಿದೆ. ಅಂದು ಅಪರಾಹ್ನ 12 ಗಂಟೆಗೆ ಮಹಾಪೂಜೆ, 12.30 ಕ್ಕೆ ಕೋಸಂಬರಿ ಪಾನಕ ವಿತರಣೆ ಹಾಗೂ 1 ಗಂಟೆಗೆ ಪ್ರಸಾದ ವಿತರಣೆ ನಡೆಯಲಿರುವದಾಗಿ ಶ್ರೀ ರಾಮ ಸೇವಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

ಪ್ರಸಕ್ತ ದೇವಾಲಯ ಜೀರ್ಣೋದ್ಧಾರ ಕೆಲಸ ನಡೆಯುತ್ತಿರುವದರಿಂದ ಉತ್ಸವ ಮೂರ್ತಿಯ ಮೆರವಣಿಗೆ ಕಾರ್ಯಕ್ರಮ ಕೈ ಬಿಡಲಾಗಿದೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.