ಗೋಣಿಕೊಪ್ಪ ವರದಿ, ಏ. 11 : ಜೆಸಿಐ ಪೊನ್ನಂಪೇಟೆ ಗೋಲ್ಡನ್ ವತಿಯಿಂದ ತಾ. 15 ರಂದು ಪೊನ್ನಂಪೇಟೆ ಬಾರ್ ಅಸೋಸಿಯೇಷನ್ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಗ್ಗೆ 9 ರಿಂದ ಶಿಬಿರ ಆರಂಭಗೊಳ್ಳಲಿದ್ದು, ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಬಯಸುವವರು ಪಾಲ್ಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗೆ 9480085060 ಸಂಪರ್ಕಿಸಬಹುದಾಗಿದೆ ಎಂದು ಜೆಸಿಐ ಪೊನ್ನಂಪೇಟೆ ಗೋಲ್ಡನ್ ಅಧ್ಯಕ್ಷೆ ಕೊಣಿಯಂಡ ಕಾವ್ಯ ಸಂಜು ಹೇಳಿಕೆಯಲ್ಲಿ ತಿಳಿಸಿದ್ದಾರೆ.