ಮಡಿಕೇರಿ, ಏ. 13: ಹೇರೂರು ಗ್ರಾಮದಲ್ಲಿರುವ ವಿದ್ಯುತ್ ಟ್ರಾನ್ಸ್‍ಫಾರ್ಮರ್‍ವೊಂದು ಬೀಳುವ ಹಂತದಲ್ಲಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಟ್ರಾನ್ಸ್‍ಫಾರ್ಮರ್ ಮುರಿದು ಬಿದ್ದು, ಅನಾಹುತ ಸಂಭವಿಸುವ ಮುನ್ನ ಇಲಾಖೆ ಎಚ್ಚೆತ್ತುಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.