ಸೋಮವಾರಪೇಟೆ, ಏ.12: ಇಲ್ಲಿನ ಆಂಜನೇಯ ಸ್ವಾಮಿ ದೇವಾಲಯ ಸಮಿತಿ ವತಿಯಿಂದ ತಾ. 13ರಂದು (ಇಂದು) ರಾಮನವಮಿ ಕಾರ್ಯಕ್ರಮ ನಡೆಯಲಿದೆ.

ಸಂಜೆ 13ರಂದು 6 ಗಂಟೆಗೆ ರಾಮಾಂಜನೇಯೋತ್ಸವದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದ್ದು, ವಿವಿಧೆಡೆಗಳಿಂದ ಸ್ತಬ್ಧಚಿತ್ರಗಳು ಆಗಮಿಸಲಿವೆ. ರಾಮನ ವಿಗ್ರಹವನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಜಾನಪದ ಕಲಾತಂಡಗಳಾದ ಡೊಳ್ಳುಕುಣಿತ, ಸುಗ್ಗಿ ಕುಣಿತ, ಪೂಜಾ ಕುಣಿತ, ವೀರಗಾಸೆ, ಚಂಡೆ ವಾದ್ಯಗಳೊಂದಿಗೆ ಶೋಭಾಯಾತ್ರೆ ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆ ತಿಳಿಸಿದೆ.