ಮಡಿಕೇರಿ, ಏ. 13: ಭ್ರಷ್ಟ ವ್ಯವಸ್ಥೆಯನ್ನು ಬದಲಾಯಿಸಿ ನಿಷ್ಠೆ ಮತ್ತು ಪ್ರಾಮಾಣಿಕ ಸಮಾಜದ ಉದಯಕ್ಕಾಗಿ ಉತ್ತಮ ಪ್ರಜಾಕೀಯ ಪಕ್ಷವನ್ನು ಬೆಂಬಲಿಸುವಂತೆ ಪಕ್ಷದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ. ಆಶಾರಾಣಿ ಕರೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಉತ್ತಮ ಪ್ರಜಾಕೀಯ ಪಕ್ಷದಿಂದ ತಾನು ಸ್ಪರ್ಧಿಸಿದ್ದು, ಈ ಪಕ್ಷ ಪ್ರಜೆಗಳಿಂದ ಪ್ರಜೆಗಳಿಗಾಗಿ ಇರುವÀ ಪಕ್ಷವಾಗಿರುವದರಿಂದ ತನ್ನನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಪ್ರಸ್ತುತ ಆಡಳಿತ ವ್ಯವಸ್ಥೆಗಳು ಹಣ ಮತ್ತು ತೋಳುಬಲದಿಂದ ನಡೆಯುತ್ತಿದೆ ಎಂದು ಆರೋಪಿಸಿದ ಆಶಾರಾಣಿ, ಸಮಾಜದಲ್ಲಿ ನಡೆಯುವ ಭ್ರಷ್ಟಾಚಾರದ ವಿರುದ್ಧ ಹೋರಾಡುವದೇ ಪ್ರಜಾಕೀಯದ ಮುಖ್ಯ ಉದ್ದೇಶವಾಗಿದೆ ಎಂದರು.