ಮಡಿಕೇರಿ, ಏ. 12: 2018-19ನೇ ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿಯಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿಗಳ) ಖಾಲಿ ಹುದ್ದೆಗೆ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳ ಬೇಡಿಕೆಯನ್ನು ಗಮನಿಸಿ ಅರ್ಜಿ ಸಲ್ಲಿಸಲು ತಾ. 18 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಕರ್ನಾಟಕ ರಾಜ್ಯ ಪತ್ರಿಕೆಯಲ್ಲಿ ವೀಕ್ಷಿಸಬಹುದು ಅಥವಾ ಉಪ ನಿರ್ದೇಶಕರು (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ, ಇಲ್ಲಿಯ ನೋಡಲ್ ಅಧಿಕಾರಿ 9449704858 ಸಂಪರ್ಕಿಸಬಹುದು.