ಕೂಡಿಗೆ, ಏ. 12: ಕೂಡಿಗೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಭಾರತೀಯ ಜನತಾ ಪಕ್ಷದ ಮಹಾಶಕ್ತಿ ಕೇಂದ್ರದ ಸಭೆ ಕೂಡ್ಲೂರಿನಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ, ಕುಶಾಲನಗರ ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಉಪಾಧ್ಯಕ್ಷ ಗಣಿಪ್ರಸಾದ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನು ರೈ, ಕೆ. ವರದ, ಶಕ್ತಿ ಕೇಂದ್ರದ ಅಧ್ಯಕ್ಷ ಶಿವಾನಂದ, ಕೂಡುಮಂಗಳೂರು ಸಹಕಾರ ಬ್ಯಾಂಕಿನ ನಿರ್ದೇಶಕ ಕೆ.ಕೆ. ಭೋಗಪ್ಪ, ಸಂಘ ಪರಿವಾರದ ಕೆ.ಕೆ. ದಿನೇಶ್, ಭರತ್ ಮಾಚಯ್ಯ ಇದ್ದರು.
ಸಭೆಯಲ್ಲಿ ಕೂಡುಮಂಗಳೂರು, ಕೂಡಿಗೆ, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯರು, ಉಪಾಧ್ಯಕ್ಷರು ಹಾಗೂ ಸ್ಥಾನೀಯ ಸಮಿತಿಯ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಕೂಡಿಗೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಹಾಶಕ್ತಿ ಕೇಂದ್ರದ 44 ಬೂತ್‍ಗಳ ಪ್ರಮುಖರು, ಬಿಜೆಪಿ ಮಹಿಳಾ ಶಕ್ತಿ ಕೇಂದ್ರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಇದ್ದರು.