ಸಿದ್ದಾಪುರ, ಏ. 12: ಕ್ರೀಡೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಚೆನ್ನಯ್ಯನಕೋಟೆ ಗ್ರಾಮದ ಸಾಗರ್ ಯೂತ್ಸ್ ಆಟ್ರ್ಸ್ ಅಂಡ್ ಸ್ಪೋಟ್ರ್ಸ್ ಕ್ಲಬ್ನ 14ನೇ ವಾರ್ಷಿಕೋತ್ಸವ ಅಂಗವಾಗಿ ಕ್ರಿಕೆಟ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮೇ 3 ರಿಂದ 5 ರವರಗೆ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಹಮ್ಮದ್ ಉರೈಸ್ ತಿಳಿಸಿದ್ದಾರೆ.
ಕ್ರಿಕೆಟ್ ಲಾಂಛನ ಬಿಡುಗಡೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕ್ರಿಕೆಟ್ ಪಂದ್ಯದಲ್ಲಿ ಪ್ರಥಮ ವಿಜೇತ ತಂಡಕ್ಕೆ ರೂ. 33,333 ಹಾಗೂ ಟ್ರೋಫಿ, ದ್ವಿತೀಯ ವಿಜೇತ ತಂಡಕ್ಕೆ ರೂ. 22.222 ಹಾಗೂ ಟ್ರೋಫಿ ನೀಡಲಾಗುವದು. ತಂಡದಲ್ಲಿ 11+2 ಆಟಗಾರರ ಆಟವಾಗಿರುತ್ತದೆ. ತಾ. 20 ರೊಳಗೆ ತಂಡದ ಹೆಸರುಗಳನ್ನು ಮೊಬೈಲ್ ಸಂಖ್ಯೆ 9900385990, 9741917874 ನೋಂದಾಯಿಸಿ ಕೊಳ್ಳತಕ್ಕದ್ದು. ನೋಂದಾಯಿತ 32 ತಂಡಗಳಿಗೆ ಮಾತ್ರ ಅವಕಾಶವಾಗಿರುತ್ತದೆ ಎಂದರು.
ಸಮಿತಿಯ ಸಂಚಾಲಕ ರದೀಶ್ ಮಾತನಾಡಿ, ಸಂಘವು ಸಾಮಾಜಿಕ ಕಳಕಳಿಯೊಂದಿಗೆ ಕ್ರೀಡೆ-ಸಾಂಸ್ಕೃತಿಕ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಮುನ್ನಡೆಯುತ್ತಿದೆ. ಕಡು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದ ಮೂಲಕ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಠ್ಯ ಪುಸ್ತಕಗಳನ್ನು ನೀಡಲಾಗುತ್ತಿದ್ದು, ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಧನ ಸಹಾಯ ದೊಂದಿಗೆ ಪ್ರಶಸ್ತಿ ನೀಡಿ ಗೌರವಿಸ ಲಾಗುತ್ತಿದೆ. ಗ್ರಾಮದ ಮೂರು ಅಂಗನವಾಡಿ ಕೇಂದ್ರಗಳಿಗೆ ಅಭಿವೃದ್ಧಿ ಹಾಗೂ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಶ್ರಮ ವಹಿಸಿದ್ದು, ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ.
ಕ್ರಿಕೆಟ್ ಉತ್ಸವ ಕಾರ್ಯಕ್ರಮದಲ್ಲಿ ಗಾಂಧಿ ಗ್ರಾಮ ಪುರಸ್ಕೃತ ಪ್ರಶಸ್ತಿ ಪಡೆದ ಪಾಲಿಬೆಟ್ಟ ಗ್ರಾಮ ಪಂಚಾಯಿತಿಂ iÀುವರನ್ನು ಹಾಗೂ ಸಮಾಜ ಸೇವೆಯಲ್ಲಿ ಸಾಧನೆಗೈದ ಗಣ್ಯ ವ್ಯಕ್ತಿಗಳನ್ನು ಸನ್ಮಾನಿಸಿ, ಗೌರವಿಸ ಲಾಗುವದು ಮತ್ತು ಗ್ರಾಮದವರಿಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕ್ರಿಕೆಟ್ ಹಬ್ಬಕ್ಕೆ ಗ್ರಾಮ ಸಜ್ಜಾಗಿದೆ ಎಂದರು. ಸಮಿತಿಯ ಉಪಾಧ್ಯಕ್ಷ ವಿಜು, ಕಾರ್ಯದರ್ಶಿ ನೌಫಲ್, ಪ್ರಮುಖರಾದ ಅನಿಲ್, ಹರಿದಾಸ್, ರವೀಂದ್ರ ಬಾವೆ, ಸಿಬು, ಕರುಣಾಕರ ಮತ್ತಿತರರು ಇದ್ದರು.